[t4b-ticker]
Uncategorizedರಾಜ್ಯ

ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆಶಿ, ಎಂಟು ಸಚಿವರು ಪದಗ್ರಹಣ

ಜನಸಾಗರ ಮತ್ತು ರಾಷ್ಟ್ರೀಯ ಮತ್ತು ಹಲವು ರಾಜ್ಯಗಳ ಗಣ್ಯರ ಮುಂದೆ ಕರ್ನಾಟಕದ ೩೧ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅವರು ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಇದೇ ವೇಳೆ ಸಂಪುಟ ಸಚಿವರಾಗಿ ಡಾ. ಪರಮೇಶ್ವರ್, ಕೆ ಎಚ್ ಮುನಿಯಪ್ಪ, ಎಂ ಬಿ ಪಾಟೀಲ್, ಕೆ ಜೆ ಜಾರ್ಜ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಬಿ ಝಡ್ ಜಮೀರ್ ಅಹ್ಮದ್ ಖಾನ್ ಅವರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಸಿದ್ದರಾಮಯ್ಯನವರು ದೇವರ ಹೆಸರಿನಲ್ಲಿ, ಶಿವಕುಮಾರ್‌ ಅವರು ನೊಣವಿನಕೆರೆ ಅಜ್ಜಯ್ಯನ ಹೆಸರಿನಲ್ಲಿ, ಪರಮೇಶ್ವರ್‌ ಅವರು ಸಂವಿಧಾನದ ಹೆಸರಿನಲ್ಲಿ, ಸತೀಶ್‌ ಜಾರಕಿಹೊಳಿ ಅವರು ಬುದ್ದ, ಬಸವ ಮತ್ತು ಅಂಬೇಡ್ಕರ್‌ ಹೆಸರಿನಲ್ಲಿ ಹಾಗೂ ಉಳಿದವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಅಖಿಲ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ ಸಿ ವೇಣುಗೋಪಾಲ್‌, ರಣದೀಪ್‌ ಸುರ್ಜೇವಾಲಾ, ಕಮಲನಾಥ್‌, ಆನಂದ್‌ ಶರ್ಮಾ, ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌, ಚತ್ತೀಸಗಢ ಮುಖ್ಯಮಂತ್ರಿ ಭೂಪೇಶ್‌ ಭಗೇಲ್‌, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌, ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಡಿಸಿಎಂ ತೇಜಸ್ವಿ ಯಾದವ್‌, ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌, ವಿಪಕ್ಷ ನಾಯಕರಾದ ಶರದ್‌ ಪವಾರ್‌, ಫಾರೂಖ್‌ ಅಬ್ದುಲ್ಲಾ, ಮೆಹಬೂಬ ಮುಫ್ತಿ ಸೇರಿದಂತೆ ಹಲವು ನಾಯಕರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

Related Articles

Leave a Reply

Your email address will not be published. Required fields are marked *

Back to top button