[t4b-ticker]
ರಾಜ್ಯ

ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ: ಮಾಜಿ ಸಿಎಂ ಬೊಮ್ಮಾಯಿ‌

ಕಾಂಗ್ರೆಸ್‌ನವರು ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ವಾಗ್ದಾಳಿ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ನಿನ್ನೆ ಸಭೆಯಲ್ಲಿ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಕೇಸರೀಕರಣ ಮಾಡಲು ಅವಕಾಶ ಕೊಡಲ್ಲ ಎಂದಿದ್ದಾರೆ. ಇಡೀ ದೇಶದಲ್ಲಿ ಕರ್ನಾಟಕ ಪೊಲೀಸ್‌ಗೆ ಉತ್ತಮ ಹೆಸರಿದೆ. ನಮ್ಮ‌ ಪೊಲೀಸರು ಕೇಸರಿಕರಣ ಯಾವತ್ತೂ ಮಾಡಿಲ್ಲ ಎಂದು ಸಮರ್ಥಿಸಿದರು.

ಕಾಂಗ್ರೆಸ್‌ನವರು ಅವರ ಅಜೆಂಡಾ ಜಾರಿ ಮಾಡಲು ಈ ರೀತಿ ತೀರ್ಮಾನ ಮಾಡಿದ್ದಾರೆ. ಇದರಿಂದ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ತುಷ್ಟೀಕರಣ ರಾಜಕಾರಣ ಮಾಡಲು ಮೊದಲ ದಿನದಿಂದ ಕಾಂಗ್ರೆಸ್ ಮುಂದಾಗಿದೆ ಎಂದು ಕಿಡಿಕಾರಿದರು.

Related Articles

Leave a Reply

Your email address will not be published. Required fields are marked *

Back to top button