[t4b-ticker]
ರಾಜ್ಯ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಕುಮಾರಸ್ವಾಮಿ ಅವಿರೋಧ ಆಯ್ಕೆ

 

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಅವಿರೋಧ ಆಯ್ಕೆ ಆಗಿದ್ದಾರೆ. ಕಳೆದ ಬಾರಿಯೂ ಅವರೇ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕರಾಗಿ ಸದನದಲ್ಲಿ ಪಕ್ಷವನ್ನು ಮುನ್ನಡೆಸಿದ್ದರು.

ವಿಧಾನಸಭೆ ಸಭಾಧ್ಯಕ್ಷರ ಕಚೇರಿಯಲ್ಲಿ ಹಂಗಾಮಿ ಸ್ಪೀಕರ್ ಆರ್ ವಿ ದೇಶಪಾಂಡೆ ಅವರಿಂದ ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಅವರು ತಮ್ಮ ಅಧ್ಯಕ್ಷತೆಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಿದರು.

ಸಭೆಯಲ್ಲಿ ಮಾಜಿ ಸಚಿವ ಎಚ್‌ ಡಿ ರೇವಣ್ಣ, ವಿಧಾನ ಪರಿಷತ್ ಸದಸ್ಯ ಕೆ ಎ ತಿಪ್ಪೇಸ್ವಾಮಿ ಅವರೂ ಸೇರಿದಂತೆ ಪಕ್ಷದ ಎಲ್ಲ 19 ನೂತನ ಶಾಸಕರು, ವಿಧಾನ ಪರಿಷತ್‌ನ ಎಲ್ಲಾ ಸದಸ್ಯರು ಹಾಜರಿದ್ದರು.

ವಿಧಾನಮಂಡಲದಲ್ಲಿ ವಿಷಯಾಧಾರಿತವಾಗಿ ಹೋರಾಟ ಮಾಡುವ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಪಕ್ಷವು ಚುನಾವಣೆಯಲ್ಲಿ ಸೋತಿದೆ. ಸೋತಿದೆ ಎಂದಾಕ್ಷಣ ಎದೆಗುಂದುವ ಅಗತ್ಯ ಇಲ್ಲ. ಪಕ್ಷ ಸಂಘಟಿಸಬೇಕಿದ್ದು, ತಳಮಟ್ಟದಲ್ಲಿ ಸಂಘಟನೆ ಬಲಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ಚುನಾಯಿತ ಶಾಸಕರು, ಸ್ಪರ್ಧೆ ಮಾಡಿದ್ದ ಎಲ್ಲಾ ಅಭ್ಯರ್ಥಿಗಳು ಕೆಲಸ ಮಾಡಬೇಕಿದೆ ಎಂದು ಕುಮಾರಸ್ವಾಮಿ ಹೇಳಿದರು.

Related Articles

Leave a Reply

Your email address will not be published. Required fields are marked *

Back to top button