[t4b-ticker]
ಜಿಲ್ಲೆರಾಜ್ಯ

ಮಾಜಿ ಪ್ರಧಾನಿ ದೇವೇಗೌಡರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ದರ್ಶನ್‌

ನಂಜನಗೂಡು ಶಾಸಕ ದರ್ಶನ್‌ ಧ್ರುವನಾರಾಯಣ್‌ ಅವರು ಜೆಡಿಎಸ್‌ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಅವರನ್ನು ಅವರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.

ಮಾಜಿ ಸಂಸದ ಧ್ರುವನಾರಾಯಣ್‌ ಅವರು ಅಕಾಲಿಕವಾಗಿ ನಿಧನರಾಗಿದ್ದರು. ಆನಂತರ ಅವರ ಪತ್ನಿಯೂ ವಿಧಿವಶರಾಗಿದ್ದರು. ಈ ಬೆನ್ನಿಗೇ ಚುನಾವಣೆ ಎದುರಿಸಿದ್ದ 28 ವರ್ಷದ ದರ್ಶನ್‌ ಅವರ ವಿರುದ್ಧ ಜೆಡಿಎಸ್‌ ಅಭ್ಯರ್ಥಿ ಹಾಕದೇ ಅವರಿಗೆ ಬೆಂಬಲ ಘೋಷಿಸಿತ್ತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕೆಪಿಸಿಸಿ ಕಾರ್ಯದರ್ಶಿ ಕಾವೇರಿಯಪ್ಪ ಉಪಸ್ಥಿತರಿದ್ದರು.

ಚುನಾವಣೆಯಲ್ಲಿ ದರ್ಶನ್‌ ಅವರು 1,08,582 ಮತಗಳನ್ನು ಪಡೆದರೆ, ಅವರ ಸಮೀಪ ಸ್ಪರ್ಧಿ ಸಂಸದ ವಿ ಶ್ರೀನಿವಾಸ್‌ ಪ್ರಸಾದ್‌ ಅವರ ಅಳಿಯ ಹಾಗೂ ಬಿಜೆಪಿ ಅಭ್ಯರ್ಥಿ ಹರ್ಷವರ್ಧನ್‌ ಅವರು 61,114 ಮತಗಳನ್ನು ಪಡೆದು 47,468 ಮತಗಳಿಂದ ಪರಾಭವಗೊಂಡಿದ್ದರು. ಈ ಮೂಲಕ ದರ್ಶನ್‌ ರಾಜ್ಯದ ಅತ್ಯಂತ ಕಿರಿಯ ಶಾಸಕ ಎಂಬ ಹೆಗ್ಗಳಿಗೆ ಪಾತ್ರರಾಗಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button