[t4b-ticker]
Uncategorized

ಸಂಪುಟದ ತೀರ್ಮಾನಕ್ಕೆ ಕಾದು ನೊಡೋಣ: ಮಾಜಿ ಸಿಎಂ ಬೊಮ್ಮಾಯಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಸಂಪುಟದಲ್ಲಿ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೊ ಕಾದು ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಜಾರಿ ಮಾಡಲು ಮುಖ್ಯಮಂತ್ರಿಗಳು ಸಭೆ ಮಾಡಲಿ. ನಾಳೆ ಸಚಿವ ಸಂಪುಟದಲ್ಲಿ ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬುದು ಗೊತ್ತಾಗಲಿದೆ. ಯಾವುದು ಕೊಡುತ್ತಾರೆ ಯಾವುದು ಇಲ್ಲ, ಏನು ಷರತ್ತು ಹಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ ಎಂದರು.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಶಾಸಕ ಲಕ್ಷ್ಮಣ ಸವದಿ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು  ಭೇಟಿ ಮಾಡಿರುವುದು ಅವರ ಪಕ್ಷದ ವಿಚಾರ ಎಂದರು.

ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸಮಿತಿ ಮಾಡುವುದಾಗಿ ಹೇಳಿದ್ದಾರೆ. ಏನು ಬದಲಾವಣೆ ಮಾಡುತ್ತಾರೆ ಎಂದು ಕಾದು ನೋಡುತ್ತೇವೆ ಎಂದು ಹೇಳಿದರು.

Leave a Reply

Your email address will not be published. Required fields are marked *

Back to top button