[t4b-ticker]
ರಾಜ್ಯ

ಒಡಿಶಾದಲ್ಲಿ ರೈಲು ದುರಂತ: ಸಚಿವ ಸಂತೋಷ್ ಲಾಡ್ ನಿಯೋಜನೆ

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ.

ಘಟನೆ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ವರದಿ ಕೇಳಿದ ಬಳಿಕ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಬಳಿಕ ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವನ್ನು ಒದಗಿಸಲು ಸೂಚನೆ ನೀಡಿದ್ದಾರೆ.

ಸಂತೋಷ್ ಲಾಡ್ ಅವರ ಜತೆಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮತ್ತು ಕರ್ನಾಟಕದ ಸರ್ಕಾರದ ವಿಶೇಷ ಕಾರ್ಯದರ್ಶಿ ಮನೋಜ್ ರಾಜನ್, ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ವಿಭಾಗದ ಕಿರಿಯ ವೈಜ್ಞಾನಿಕ ಅಧಿಕಾರಿ ಎಸ್‌ ಸುನಿಲ್‌ ಮನೊ ಗವಾಸ್ಕರ್‌ ಹಾಗೂ ಕೆಪಿಸಿಸಿ ವಕ್ತಾರ ಅನಿಲ್‌ ಕುಮಾರ್‌ ತಡಕಲ್ ಅವರೂ ಸಚಿವ ಸಂತೋಷ್‌ ಲಾಡ್‌ ಜೊತೆ ತೆರಳಲಿದ್ದಾರೆ.

ರಾಜ್ಯ ತುರ್ತು ನಿರ್ವಹಣಾ ಕೇಂದ್ರ (SEOC)ದಲ್ಲಿ ನಾಗರೀಕರ ಅನುಕೂಲಕ್ಕಾಗಿ ಸಹಾಯ ವಾಣಿ ಸಂಖ್ಯೆ 1070, 080-22253707, 080-22340676 ತೆರೆಯಲಾಗಿದೆ.

Related Articles

Leave a Reply

Your email address will not be published. Required fields are marked *

Back to top button