[t4b-ticker]
ರಾಜ್ಯ

ಜುಲೈ 7ರಂದು ಬಜೆಟ್‌ ಮಂಡನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜುಲೈ 3ರಂದು ಆಯವ್ಯಯ ಅಧಿವೇಶನ ಬಹುತೇಕ ಪ್ರಾರಂಭವಾಗಲಿದ್ದು, 7ರಂದು ಬಜೆಟ್ ಮಂಡಿಸಲಾಗುವುದು. ಈ ಬಗ್ಗೆ ಸಂಪುಟದಲ್ಲಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ದಾವಣಗೆರೆ ಹೆಲಿಪ್ಯಾಡಿನ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಈ ಬಾರಿಯ ಬಜೆಟ್ ಗಾತ್ರದ ಬಗ್ಗೆ ಬಜೆಟ್ ಸಿದ್ಧತೆಗಳ ಸಭೆ ಪ್ರಾರಂಭವಾದ ನಂತರ ಸ್ಪಷ್ಟ ಚಿತ್ರಣ ದೊರೆಯಲಿದೆ. ಹಿಂದಿನ ಸರ್ಕಾರ 3.09 ಲಕ್ಷ ಕೋಟಿ ರೂಪಾಯಿ ಬಜೆಟ್ ಮಂಡಿಸಿತ್ತು ಎಂದರು.

ಗೋ ಹತ್ಯೆ ನಿಷೇಧ ಕಾಯಿದೆಯ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. 1964 ಕಾಯಿದೆಯಲ್ಲಿ 12 ವರ್ಷ ತುಂಬಿರುವ ಬರಡು ಹಾಗೂ ವ್ಯವಸಾಯಕ್ಕೆ ಉಪಯೋಗವಿಲ್ಲದ ರಾಸುಗಳ ಬಗ್ಗೆ ಹೇಳಲಾಗಿದೆ. ಆಮೇಲೆ ತಿದ್ದುಪಡಿಯಾಗಿದೆ ಎಂದರು.

ರೈತರಿಗೆ ತೊಂದರೆಯಾಗದಂತೆ ಬೀಜ ಗೊಬ್ಬರಗಳ ಸರಬರಾಜು ಆಗಬೇಕು ಎಂದು ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳಿಗೆ ವೀಡಿಯೋ ಸಂವಾದದ ಮುಖಾಂತರ ತಿಳಿಸಲಾಗಿದೆ. ಪ್ರವಾಹ ಉಂಟಾದರೆ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದರು.

ವಿದ್ಯುತ್ ದರ ಏರಿಕೆ: ವಿದ್ಯುತ್ ದರ ಏರಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ ವಿದ್ಯುತ್ ದರ ಏರಿಕೆ ಆರ್ ಇ ಸಿ ನಲ್ಲಿ ಮೊದಲೇ ತೀರ್ಮಾನವಾಗಿದೆ. ಹಿಂದೆಯೇ ಆಗಿದ್ದ ತೀರ್ಮಾನವನ್ನು ಈಗ ಜಾರಿ ಮಾಡಲಾಗಿದೆ ಎಂದರು.

ಇಂದಿರಾ ಕ್ಯಾಂಟೀನ್‍: ಇಂದಿರಾ ಕ್ಯಾಂಟೀನ್‍ಗಳನ್ನು ಪುನರಾರಂಭಿಸಲು ಸಿದ್ಧತೆಗಳನ್ನು ಮಾಡಲು ಸೂಚಿಸಲಾಗಿದೆ. ಕ್ಯಾಂಟೀನುಗಳ ನೌಕರರಿಗೆ ವೇತನ ದೊರೆತಿಲ್ಲವಾದರೆ ಅಥವಾ ಬಾಕಿ ಇದ್ದರೆ ಅದನ್ನು ಕೊಡಿಸುವ ವ್ಯವಸ್ಥೆ  ಮಾಡಲಾಗುವುದು ಎಂದರು.

Related Articles

Leave a Reply

Your email address will not be published. Required fields are marked *

Back to top button