[t4b-ticker]
ರಾಜ್ಯ

ಗ್ಯಾರಂಟಿ ಯೋಜನೆ ವಿರುದ್ಧ ಪ್ರತಿಭಟಿಸಲು ಬಿಜೆಪಿಗೆ ನೈತಿಕ ಹಕ್ಕಿಲ್ಲ: ಸಿಎಂ

ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲು ಯಾವ ನೈತಿಕ ಹಕ್ಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ವಿಧಾನಸೌಧದ ಆವರಣದಲ್ಲಿರುವ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಹತ್ತು ಗಂಟೆಗಳ ವಿದ್ಯುತ್ ನೀಡುತ್ತೇವೆ, ಸಾಲ ಮನ್ನಾ ಮಾಡುತ್ತೇವೆ ಎಂದರು. ಯಾವುದನ್ನೂ ಜಾರಿಗೆ ತರಲಿಲ್ಲ. ಅವರು ಹೇಳಿದ್ದನ್ನು ಮಾಡದೇ ಮೊಸರಿನಲ್ಲಿ ಕಲ್ಲಿ ಹುಡುಕುವ ಕೆಲಸ ಮಾಡುತ್ತಾರೆ ಎಂದರು.

ಜನವಿರೋಧಿಯಾಗಿರುವ ಬಿಜೆಪಿ ಅಧಿಕಾರದಲ್ಲಿದ್ದಾಗ ಲೂಟಿ ಹೊಡೆದು, ರಾಜ್ಯಕ್ಕೆ ಕೆಟ್ಟ ಹೆಸರು ತಂದರು. ನಮಗೆ ಈಗ ಪಾಠ ಹೇಳಿಕೊಡಲು ಬರುತ್ತಾರೆ. 2018 ರಲ್ಲಿ 600 ಭರವಸೆಗಳನ್ನು ನೀಡಿ ಅದರಲ್ಲಿ ಎಷ್ಟು ಭರವಸೆಗಳನ್ನು ಈಡೇರಿಸಿದ್ದಾರೆ. ನಮ್ಮ ಸರ್ಕಾರ 15 ದಿನಗಳೊಳಗೆ ಎಲ್ಲಾ 15 ಗ್ಯಾರಂಟಿಗಳನ್ನು ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ  ಮಾಡಿದೆ. ಹಿಂದೆ ಅಧಿಕಾರದಲ್ಲಿದ್ದಾಗ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ.  ಇಂದಿರಾ ಕ್ಯಾಂಟೀನ್ ನಿಲ್ಲಿಸಿ, ಕೃಷಿ ಹಾಗೂ ಪಶುಭಾಗ್ಯ, ಶೂ ಭಾಗ್ಯ ಸೈಕಲ್ ಕೊಡುವುದನ್ನು ಬಿಜೆಪಿ ನಿಲ್ಲಿಸಿದರು ಎಂದು ವಾಗ್ದಾಳಿ ದಾಳಿ ನಡೆಸಿದರು.

Related Articles

Leave a Reply

Your email address will not be published. Required fields are marked *

Back to top button