[t4b-ticker]
ರಾಜ್ಯ

ಬಿಜೆಪಿ ಸರ್ಕಾರದ ಕಾಲದಲ್ಲಿಯೇ ವಿದ್ಯುತ್ ದರ ಹೆಚ್ಚಳಕ್ಕೆ ಅಸ್ತು: ಎಚ್‌ಡಿಕೆ

ಬೆಂಗಳೂರು ನಗರಾಭಿವೃದ್ಧಿ ಸಚಿವರು ಸ್ನೇಹಕ್ಕೂ ಸಿದ್ದ, ಯುದ್ದಕ್ಕೂ ಸಿದ್ದ ಅಂದಿದ್ದಾರೆ. ನಾವು ಇಲ್ಲಿ ಕೂತಿರೋದು ಸ್ನೇಹ ಮಾಡೋಕ್ಕಲ್ಲ. ಜನರಿಗೆ ಕಷ್ಟ ಬಂದರೆ ಯುದ್ಧ ಮಾಡುವುದಕ್ಕೆ ಹಿಂಜರಿಯುವುದಿಲ್ಲ. ನಾವು ಕೈಕಟ್ಟ ಕೂರಲು ಸಾಧ್ಯವಿಲ್ಲ ಎಂದು ಜೆಡಿಎಸ್‌ ಮುಖಂಡ ಕುಮಾರಸ್ವಾಮಿ ಅವರು ಮಾಧ್ಯಮಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.

ವಿದ್ಯುತ್ ದರ ಏರಿಕೆಗೆ ಸಂಬಂಧಿಸಿ ಬಿಜೆಪಿ ನಾಯಕರು ಇಡೀ ರಾಜ್ಯದಲ್ಲಿ ಸೋಮವಾರ ಧರಣಿ ಮಾಡಿದ್ದಾರೆ. ಇವರು ಯಾವ ಕಾರಣಕ್ಕಾಗಿ ಧರಣಿ ಪ್ರತಿಭಟನೆ ಮಾಡಿದ್ದಾರೆ ಎನ್ನುವುದೇ ಸೋಜಿಗ. ಬಿಜೆಪಿ ಸರ್ಕಾರದ ಕಾಲದಲ್ಲಿಯೇ ವಿದ್ಯುತ್ ದರ ಹೆಚ್ಚಳಕ್ಕೆ ಅಸ್ತು ಎಂದಿದ್ದು. ಇವತ್ತು ನೋಡಿದರೆ ಪ್ರತಿಭಟನೆ ಅಂತ ಕಣ್ಣೊರೆಸುವ ನಾಟಕ ನಾಟಕ ಆಡುತ್ತಿದ್ದಾರೆ. ಜನರು ಎರಡೂ ರಾಷ್ಟ್ರೀಯ ಪಕ್ಷಗಳ ಈ ನಡವಳಿಕೆ ಗಮನಿಸಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ರಾಷ್ಟ್ರೀಯ ಪಕ್ಷಕ್ಕೆ ಮತ ಹಾಕಿದ ಪರಿಣಾಮ ಏನು ಎನ್ನುವುದು ಜನರಿಗೆ ಚೆನ್ನಾಗಿ ಅರ್ಥ ಆಗಿದೆ. ಎಲ್ಲದಕ್ಕೂ ದೆಹಲಿಗೆ ಅರ್ಜಿ ಹಿಡಿದುಕೊಂಡು ದೆಹಲಿಗೆ ಹೋಗಬೇಕಿದೆ. ಐದು ಗ್ಯಾರಂಟಿಗಳ ಬಗ್ಗೆ ನಾನು ಈಗಲೇ ಚರ್ಚೆ ಮಾಡಲ್ಲ. ನಾನು ಕಾಯುತ್ತೇನೆ. ಕಾಂಗ್ರೆಸ್‌ನವರು ಗ್ಯಾರಂಟಿ ಕೊಟ್ಟಿದ್ದು ತಪ್ಪಲ್ಲ, ಆದರೆ ಈಡೇರಿಸಬೇಕು. ಅದು ಆಡಳಿತ ಪಕ್ಷದ ಹೊಣೆ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಈ ಸರ್ಕಾರಕ್ಕೆ ನಮ್ಮ ಬೆಂಬಲ, ವಿರೋಧ ವಿಷಯಾಧಾರಿತ ಆಗಿರುತ್ತದೆ. ನೀರಾವರಿ ಯೋಜನೆಗಳನ್ನು ಎಲ್ಲವನ್ನೂ ಈಡೇರಿಸಬೇಕು. ನೀರಾವರಿಗೆ ಸಂಬಂಧಿಸಿದಂತೆ ಈ ಸರ್ಕಾರ ಮುಂದಿನ ಐದು ವರ್ಷಗಳ ಕಾಲ ಯಾವ ರೀತಿ ಕೆಲಸ ಮಾಡುತ್ತೆದೆಯೋ ನೋಡೋಣ. ಮೇಕೆದಾಟು, ಮಹಾದಾಯಿ ಯೋಜನೆಗಳನ್ನು ಸಂಪೂರ್ಣ ಮಾಡುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ. ಇದಕ್ಕೆ ನಮ್ಮ ಬೆಂಬಲ ಇದೆ. ಇದನ್ನು ಬಿಟ್ಟು ಬರೀ ಹೇಳಿಕೆಗೆ ಸೀಮಿತವಾದರೆ ನಾವು ಮತ್ತೆ ಜನರನ್ನು ಜಾಗೃತ ಗೊಳಿಸುವ ಬಗ್ಗೆ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

ಮಾಜಿ ಸಂಸದ ಕುಪೇಂದ್ರ ರೆಡ್ಡಿ, ಪಕ್ಷದ ಹಿರಿಯ ನಾಯಕ, ಶಾಸಕ ವೆಂಕಟಶಿವಾರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಬಿಎಂ ಫಾರೂಖ್, ಟಿ.ಎ.ಶರವಣ, ಇಂಚರ ನಾರಾಯಣಸ್ವಾಮಿ, ಪಕ್ಷದ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಶಾಸಕರಾದ ಮೇಲೂರು ರವಿ, ಸಮೃದ್ಧಿ ಮಂಜುನಾಥ್, ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಶ್ರೀನಿವಾಸ ಮೂರ್ತಿ, ಹಿರಿಯ ಮುಖಂಡರಾದ ಜವರಾಯ ಗೌಡ, ಸಿಎಂಆರ್ ಶ್ರೀನಾಥ್, ಮುನೇಗೌಡ, ಬಂಗಾರಪೇಟೆ ಮಲ್ಲೇಶ್ ಮುಂತಾದವರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button