[t4b-ticker]
ರಾಜ್ಯ

ಬಾಡಿಗೆದಾರರಿಗೂ ಉಚಿತ ವಿದ್ಯುತ್ ಅನ್ವಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಇನ್ನೂರು ಯೂನಿಟ್‌ಗಳ ಒಳಗೆ ವಿದ್ಯುತ್ ಬಳಕೆ ಮಾಡುವವರು ಶುಲ್ಕ ಪಾವತಿಸುವ ಅಗತ್ಯವಿಲ್ಲ.  ಬಾಡಿಗೆದಾರರಿಗೂ ಇದು ಅನ್ವಯ. ವಾಣಿಜ್ಯ ಕಟ್ಟಡಗಳಿಗೆ ಮಾತ್ರ ಇದು ಅನ್ವಯಿಸುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 41ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ದೇವರಾಜ ಅರಸು ಅವರು ನಾಡು ಕಂಡ ಮುತ್ಸದಿ ರಾಜಕಾರಣಿ. ಸರ್ಕಾರ ಗೌರವಯುತವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರ ಸ್ಮರಣೆ ಮಾಡಿದೆ.

ಮುಖ್ಯ ಮಂತ್ರಿಯಾಗಿ ಹಾಗೂ ಅವರ ಜೀವಿತ ಕಾಲದಲ್ಲಿ ಮಾಡಿದ ಕೆಲಸ ನಮಗೆ ಸ್ಪೂರ್ತಿ. ಸಾಮಾಜಿಕ ನ್ಯಾಯದ ಹರಿಕಾರ. ಅನೇಕ ಸಾಮಾಜಿಕ, ಕ್ರಾಂತಿಕಾರಿ ತೀರ್ಮಾನಗಳನ್ನು ಕೈಗೊಂಡಿದ್ದರು. ಭೂ ಸುಧಾರಣಾ ಕಾಯಿದೆ, ಜೀತಪದ್ಧತಿ ಮುಕ್ತಿ, ಮಲಹೊರುವ ಪದ್ಧತಿಯನ್ನು ನಿಲ್ಲಿಸಿದ್ದು, ರೈತರ ಸಾಲ ವಿಮೋಚನಾ ಕಾಯಿದೆ, ಹಾವನೂರು ಆಯೋಗ ರಚಿಸಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ, ಧ್ವನಿಯಿಲ್ಲದ ಜನರ ದನಿಯಾದರು ಎಂದರು.

ಅನೇಕ ಮಂದಿಯನ್ನು ಶಾಸಕರನ್ನಾಗಿಸಿ ಅವರಿಗೆ ಪ್ರಾತಿನಿಧ್ಯ ನೀಡುವ ಕೆಲಸವನ್ನು ಅರಸು ಮಾಡಿದರು. ರಾಜಕೀಯ ವ್ಯವಸ್ಥೆಯಲ್ಲಿಯೂ ಸಾಮಾಜಿಕ ನ್ಯಾಯ ತರಲು ಶ್ರಮಿಸಿದರು. ಅಧಿಕಾರ ಎಲ್ಲರಿಗೂ ದೊರೆಯಬೇಕು ಎಂಬ ನಂಬಿಕೆ ಉಳ್ಳವರಾಗಿದ್ದರು. ಉಳುವವನೆ ಭೂಮಿ ಒಡೆಯ ಎಂಬ ಕ್ರಾಂತಿಕಾರಿ ತೀರ್ಮಾನಗಳನ್ನು ಮಾಡಿದವರು.  ಅವರ ಕೆಲಸಗಳನ್ನು ಮುಂದುವರೆಸಿಕೊಂಡು ಹೋಗುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ ಎಂದರು.

ದೇವರಾಜ ಅರಸು ಅವರು ಕಾಂಗ್ರೆಸ್ ಪಕ್ಷದಿಂದ 1982 ರಿಂದ 80 ರವರೆಗೆ ಮುಖ್ಯಮಂತ್ರಿಯಾಗಿ ಮಾಡಿದ ಕೆಲಸಗಳು ಜನರ ಮನಸ್ಸಿನಲ್ಲಿ ಸದಾ ಉಳಿದಿವೆ ಎಂದು ತಿಳಿಸಿದರು.

ದೇವರಾಜ್ ಅರಸ್ ಅವರ ಪುಣ್ಯತಿಥಿಯ ಅಂಗವಾಗಿ ಸಿದ್ದರಾಮಯ್ಯ ಅವರು ವಿಧಾನಸೌಧದ ಆವರಣದಲ್ಲಿ ಮಡಗಾಸ್ಕರ್ ದೇಶದ ಗಿಡವನ್ನು ನೆಟ್ಟರು. ಸದಾ ಹಸಿರಾಗಿರುವ, ಸುಮಾರು 40 ಅಡಿ ಎತ್ತರ ಬೆಳೆಯುವ ,  ಮಾಲಿನ್ಯ ತಡೆಗಟ್ಟುವ ವಿಶೇಷ ಗಿಡವನ್ನು ಅರಸು ಅವರ ನೆನಪಿಗೆ ನೆಡಲಾಗಿದೆ ಎಂದರು.

Related Articles

Leave a Reply

Your email address will not be published. Required fields are marked *

Back to top button