[t4b-ticker]
ರಾಜ್ಯ

ಜನಾರ್ದನ ರೆಡ್ಡಿ, ಪತ್ನಿ ಅರುಣಾಗೆ ಸೇರಿದ 65 ಕೋಟಿ ಆಸ್ತಿ ಜಪ್ತಿಗೆ ಆದೇಶ

ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿಯಾಗಿರುವ ಗಂಗಾವತಿಯ ಶಾಸಕ ಗಾಲಿ ಜನಾರ್ದನ ರೆಡ್ಡಿ ಮತ್ತು ಅವರ ಪತ್ನಿ ಜಿ ಲಕ್ಷ್ಮಿ ಅರುಣಾ ಅವರಿಗೆ ಸೇರಿದ 65.05 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ ಮಾಡಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೋಮವಾರ ಸಿಬಿಐ ಅನುಮತಿಸಿದೆ.

ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ ಜಯಂತ ಕುಮಾರ್‌ ಅವರು ಪುರಸ್ಕರಿಸಿದ್ದಾರೆ.

“ಜನಾರ್ದನ ರೆಡ್ಡಿ ಮತ್ತು ಅವರ ಪತ್ನಿ ಹಾಗೂ ಪತ್ನಿ ಲಕ್ಷ್ಮಿ ಅರುಣಾ ಅವರಿಗೆ ಸೇರಿದ ಆಸ್ತಿಗಳನ್ನು ಜಪ್ತಿ ಮಾಡಬಹುದಾಗಿದೆ. ಪ್ರಧಾನ ಪ್ರಕರಣದಲ್ಲಿ ಪ್ರಕಟವಾಗುವ ತೀರ್ಪು ಆಧರಿಸಿ, ಜಪ್ತಿ ಮಾಡಲಾದ ಆಸ್ತಿ ವಿಲೇವಾರಿ ಮಾಡಬಹುದು” ಎಂದು ನ್ಯಾಯಾಲಯವು ಆದೇಶದಲ್ಲಿ ದಾಖಲಿಸಿದೆ.

ಇದರಲ್ಲಿ ಜನಾರ್ದನ ರೆಡ್ಡಿ ಅವರಿಗೆ ಸೇರಿದ 6 ಆಸ್ತಿಗಳ ಪೈಕಿ 5 ಅನ್ನು, ಲಕ್ಷ್ಮಿ ಅರುಣಾ ಅವರಿಗೆ ಸೇರಿದ 118 ಆಸ್ತಿಗಳ ಪೈಕಿ 77 ಆಸ್ತಿಗಳನ್ನು ಜಪ್ತಿ ಮಾಡಲು ವಿಶೇಷ ನ್ಯಾಯಾಲಯ ಅನುಮತಿಸಿದ್ದು, ಒಟ್ಟು 82 ಆಸ್ತಿಗಳನ್ನು ಜಪ್ತಿ ಮಾಡಲು ಸಿಬಿಐಗೆ ಅನುಮತಿಸಲಾಗಿದೆ. ಖಾಲಿ ನಿವೇಶನ, ಫ್ಲ್ಯಾಟ್‌, ವಾಣಿಜ್ಯ ಸಮುಚ್ಚಯ, ಜಮೀನುಗಳು ಜಪ್ತಿಯ ಭಾಗವಾಗಿವೆ.

Related Articles

Leave a Reply

Your email address will not be published. Required fields are marked *

Back to top button