[t4b-ticker]
ರಾಜ್ಯ

ಅಕ್ಕಿ ವಿತರಣೆಯಲ್ಲಿ ರಾಜಕೀಯ ಬೇಡ ಎಂದು ಅಮಿತ್‌ ಶಾಗೆ ತಿಳಿಸಿರುವೆ: ಸಿಎಂ

ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾತ್ರಿ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ ಬಗ್ಗೆ ಸಿದ್ದರಾಮಯ್ಯ ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

ನಿನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಭಾರತೀಯ ಆಹಾರ ನಿಗಮ (ಎಫ್‌ಸಿಐ) ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ  ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ ವಿಚಾರವನ್ನು ಗಮನಕ್ಕೆ ತರಲಾಗಿದೆ.  ಅಮಿತ್ ಶಾ ಅವರು ಸಂಬಂಧಪಟ್ಟ ಮಂತ್ರಿಗಳಿಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದರು.

ರಾಜ್ಯಕ್ಕೆ ಎರಡು ಐಆರ್ ಪಿ ಬೆಟಾಲಿಯನ್‌ ಒದಗಿಸಿದ್ದು, ಇನ್ನೆರಡು ಬೆಟಾಲಿಯನ್ ಒದಗಿಸಬೇಕು ಎಂದು ಮನವಿ ಮಾಡಲಾಗಿದೆ ಎಂದರು.

Related Articles

Leave a Reply

Your email address will not be published. Required fields are marked *

Back to top button