[t4b-ticker]
ರಾಜ್ಯ

ಕಮಿಷನ್ ದಂಧೆಗೆ ಕಡಿವಾಣ: ಸಿಎಂ ಭರವಸೆ

ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಗುತ್ತಿಗೆದಾರರಿಗೆ ಸಮಸ್ಯೆ ಆಗಿದೆ. ಬಿಜೆಪಿ ಹಳಿ ತಪ್ಪಿಸಿರುವ ಆರ್ಥಿಕತೆಯನ್ನು ಸರಿಯಾಗಿಸಲು ಸ್ವಲ್ಪ ಸಮಯಾವಕಾಶ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ರಾಜ್ಯ ಗುತ್ತಿಗೆಗಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಅವರ ನೇತೃತ್ವದ ನಿಯೋಗವು ಶುಕ್ರವಾರ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಬಾಕಿ ಇರುವ ಬಿಲ್ಲುಗಳ ಪಾವತಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಕಮಿಷನ್ ಹಾವಳಿಗೆ ಕಡಿವಾಣ ಹಾಕಿ, ಸ್ಥಳೀಯ ಗುತ್ತಿಗೆದಾರರ ಹಿತಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಬಜೆಟ್ ಮಂಡನೆಯಾಗಬೇಕಿದೆ. ಬಜೆಟ್ ಅಧಿವೇಶನದ ನಂತರ ಬಿಬಿಎಂಪಿ ಹಾಗೂ ಆರ್ಥಿಕ ಇಲಾಖೆ ಕಾರ್ಯದರ್ಶಿಗಳ ಸಭೆ ಕರೆದು  ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬಿಬಿಎಂಪಿಯಲ್ಲಿ 2,000 ಕೋಟಿ ರೂಪಾಯಿ ಹಾಗೂ ನಗರೋತ್ಥಾನ ಯೋಜನೆಯಡಿ 1,500 ಕೋಟಿ ರೂಪಾಯಿ ಬಾಕಿ ಇದೆ. ತಡೆಹಿಡಿದಿರುವ  ಮೊತ್ತ ಪರಿಶೀಲಿಸಿ ಬಿಡುಗಡೆ ಮಾಡಬೇಕು ಹಾಗೂ ನಿರಾಕ್ಷೇಪಣಾ ಪತ್ರವನ್ನು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು.

ಸಂಘದ ಪದಾಧಿಕಾರಿಗಳಾದ ಆರ್ ಅಂಬಿಕಾಪತಿ, ಜಿ ಎಂ ರವೀಂದ್ರ, ಸಂಕಾಗೌಡ ಶಾನಿ, ನಾಗರಾಜ್, ಆರ್ ಮಂಜುನಾಥ್, ರಮೇಶ್ ಮೊದಲಾದವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button