[t4b-ticker]
ರಾಜ್ಯ

ಗೃಹ ಜ್ಯೋತಿ ಹೊರೆ ಕೈಗಾರಿಕೆಗಳ ಮೇಲೆ ಎಂಬುದು ಪರಮ ಸುಳ್ಳು: ಸಿಎಂ

ಗೃಹಜ್ಯೋತಿ ಯೋಜನೆಯ ಹೊರೆಯನ್ನು ಯಾರ ಮೇಲೂ ಹಾಕುತ್ತಿಲ್ಲ. ಇದೊಂದು ತಪ್ಪು ಅಭಿಪ್ರಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೈಗಾರಿಕೋದ್ಯಮಿಗಳಿಗೆ ತಿಳಿಸಿದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷ ಬಿ ವಿ ಗೋಪಾಲ ರೆಡ್ಡಿ ಅವರ ನೇತೃತ್ವದ ನಿಯೋಗವು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಸಂದರ್ಭದಲ್ಲಿ ಹಿಂದಿನ ಸರ್ಕಾರದ ಅವಧಿಯಲ್ಲಿ ಆಗಿದ್ದನ್ನು ಮನವರಿಕೆ ಮಾಡಿಸಿದರು.

ನಮ್ಮ ಸರ್ಕಾರ ವಿದ್ಯುತ್ ಶುಲ್ಕವನ್ನು  ಏರಿಸುವ ನಿರ್ಧಾರ ಮಾಡಿಲ್ಲ.  ಕೆ ಇ ಆರ್ ಸಿಯು ಬೆಲೆ ಹೆಚ್ಚಳದ ನಿರ್ಧಾರವನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಕೈಗೊಂಡಿತ್ತು ಎಂದು ವಿವರಿಸಿದರು. ನಿಯೋಗ ಮಾಡಿರುವ ಮನವಿಯ ಕುರಿತು ಆರ್ಥಿಕ, ಇಂಧನ ಇಲಾಖೆ, ಕಾಸಿಯಾ, ಎಫ್ ಕೆ ಸಿ ಸಿ ಐ ಅವರೊಂದಿಗೆ ಪ್ರತ್ಯೇಕ ಸಭೆ ಕರೆದು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಕೆ ಇ ಆರ್ ಸಿ ತನ್ನ ಸುಂಕದ ಆದೇಶದಲ್ಲಿ ಉದ್ಯಮ ವಲಯಕ್ಕೆ ವಿದ್ಯುತ್ ದರವನ್ನು ಹೆಚ್ಚಿಸಿದ್ದು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಎಚ್ ಟಿ ಕೈಗಾರಿಕೆಗಳ ಮೇಲೆ ವಿಧಿಸುವ ಶೇ 9 ರಷ್ಟು ವಿದ್ಯುತ್ ತೆರಿಗೆಯನ್ನು ಶೇ 3 ರಷ್ಟು  ಇಳಿಸಬೇಕು ಎಂದು ಮನವಿ ಮಾಡಿದರು.

ಇಂಧನ ಶುಲ್ಕದಲಿ ನೀಡಲು ಹಾಗೂ ಇತರೆ ರಾಜ್ಯಗಳಲ್ಲಿ ಎಂ ಎಸ್ ಎಂ ಇ ನೀತಿ  ಹಾಗೂ ಕಾಯಿದೆ ಇರುವಂತೆ ರಾಜ್ಯದಲ್ಲಿಯೂ ಕಾಯಿದೆ ರಚನೆ ಮಾಡುವಂತೆ ಮನವಿ ಮಾಡಿದರು.

Related Articles

Leave a Reply

Your email address will not be published. Required fields are marked *

Back to top button